ಪಾಪ ಈ ಇಂಗ್ಲೆಂಡ್ ಹುಡುಗಿ ನೋಡಕ್ಕೆ ಎಷ್ಟು ಚೆನ್ನಾಗಿದಾಳೋ ಅಷ್ಟೇ ವಿಚಿತ್ರ ರೋಗದಿಂದ ನರಳ್ತಾ ಇದಾಳೆ

ಬಾಯ್ ಫ್ರೆಂಡ್ ಪಾಪ ಒಳ್ಳೆಯೋನು

ಇವಳ ಹೆಸರು ಬೆತ್ ಗುಡಿಯರ್ ಅಂತ. ವಯಸ್ಸು 22 ಈಗ. 16 ನೇ ವಯಸ್ಸಲ್ಲಿ ಒಂದ್ ದಿನ ಸೋಫಾ ಮೇಲೆ ಹೋಗಿ ಮಲ್ಕೊಂಡೋಳು 6 ತಿಂಗಳು ಎದ್ದೇಳಲೇ ಇಲ್ಲವಂತೆ.

ದಿನಕ್ಕೆ 22 ಗಂಟೆ ಮಲ್ಕೋತಿದ್ಲಂತೆ. 2 ಗಂಟೆ ಎದ್ದಾಗ ಎಲ್ಲೆಲ್ಲೋ ಜ್ಞಾನ.

ಅವರಮ್ಮ ಜ್ಯಾನೀನ್ ಲೆಕ್ಕ ಹಾಕಿರೋ ಪ್ರಕಾರ ಇವಳು ಕಳೆದ 5 ವರ್ಶದಲ್ಲಿ ಶೇ. 75 ರಷ್ಟು ಹೊತ್ತು ಮಲ್ಕೊಂಡೇ ಇದಾಳೆ.

ಡಾಕ್ಟರ್ಗಳ ಪ್ರಕಾರ ಇವಳಿಗೆ KLS - Kleine-Levin Syndrome ಅನ್ನೋ ರೋಗ ಇದೆ.

ಇದನ್ನ Sleeping Beauty Syndrome ಅಂತ್ಲೂ ಕರೀತಾರೆ. ಇದಕ್ಕೆ ಕಾರಣ ಏನಿರಬಹುದು, ಯಾರಿಗೆ ಯಾವಾಗ ಹೀಗ್ ಆಗುತ್ತೆ ಅಂತ ಯಾರಿಗೂ ಗೊತ್ತಿಲ್ಲ.

ಈಗಲೂ ಎರಡೂ ವರೆ ತಿಂಗಳಿಂದ ಬೆತ್ ಗುಡಿಯರ್ ಮನೇಲಿ ಮಲ್ಕೊಂಡೇ ಇದಾಳೆ.

ಅವಳಿಗೆ ನಡೆಯಕ್ಕೂ ಸುಸ್ತಂತೆ. ಡಾಕ್ಟರ್ ಹತ್ತಿರ ಹೋಗುವಾಗ ತಳ್ಳಬೇಕಾಗುತ್ತಂತೆ.

3 ವರ್ಷದ ಹಿಂದೆ ಇವಳು ಕೆಲವು ದಿನ ಎದ್ದಿದ್ದಾಗ ಡ್ಯಾನ್ ಅನ್ನೋ ಈತ ಅವಳಿಗೆ ಸಿಕ್ಕೆ ಇಬ್ಬರಿಗೂ ಲವ್ ಆಯಿತಂತೆ. ಡ್ಯಾನ್ ಯಾವಾಗಲೂ ಅವಳ ಜೊತೆ ಇದ್ದು ನೋಡ್ಕೋತಾನಂತೆ.

ಇವಳ ಈ ಸ್ಥಿತಿ ಡಾಕ್ಟರ್ಗಳಿಗೆ ತಲೆ ಕೆಡಿಸ್ತಾ ಇದೆಯಂತೆ.

ಮೊದಮೊದಲು ಇವಳ ಮಿದುಳಿಗೆ ಎಲ್ಲೋ ಹೆಮರೇಜ್ ಆಗಿರಬೇಕು ಅನ್ಕೊಂಡ್ರಂತೆ. ಆದರೆ ಇನ್ನೊಬ್ಬರು ಡಾಕ್ಟರ್ ಇಂಥದ್ದೇ ಒಂದು ಕೇಸ್ ಇದೆ ಅಂತ ಹೇಳಿದಾಗ ಅವರಿಗೆ ಇದು KLS ಕೇಸು ಅಂತ ಗೊತ್ತಾಯಿತಂತೆ.

ಆಶ್ಚರ್ಯ ಏನೂಂದ್ರೆ ಇಂಗ್ಲೆಂಡಲ್ಲಿ ಈ ತರಹ 100ಕ್ಕಿಂತ ಹೆಚ್ಚು ಜನ ಇದಾರಂತೆ. ಎಲ್ಲರೂ ಹದಿಹರೆಯರು. ಎಂಥ ವಿಚಿತ್ರ ಅಲ್ವಾ?

ಮಾಹಿತಿ, ಫೋಟೋಗಳು: [1]

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನಿಮ್ಮ ಲೈಕೇ ನಮಗೆ ಪ್ರೇರಣೆ. ಕಳ್ಕೊಳಕ್ಕೇನಿದೆ? ಮಾಡಿಬಿಡಿ!

ನಾನು ಜೀವನದಲ್ಲಿ ಹಿಂದೆ ಬೀಳ್ತಾ ಇದೀನಿ ಅನ್ನೋ ಮುಳ್ಳು ಚುಚ್ತಾ ಇದ್ರೆ ಈ 30 ಮಾತು ನೆನಪಿಸಿಕೊಳ್ಳಿ

ವೇದಾಂತ ಗೀದಾಂತ ಅಲ್ಲ, ಸಿಂಪಲ್ ವಿಷಯಗಳು

ನಮ್ಮ ಪ್ರಕಾರ ನಾವು ಜೀವನದಲ್ಲಿ ಎಷ್ಟೇ ಗೆಲುವು ಸಾಧಿಸಿದ್ದರೂ… ನಮ್ಮ ಪ್ರಕಾರ ನಮಗೆ ಬೇಕಾದ್ದೆಲ್ಲ ಇದ್ದರೂ… ಬೇಕಾದೋರೆಲ್ಲ ಇದ್ದರೂ… ಜೀವನ ಒಂದೊಂದ್ಸಲ ನಮಗೆ "ನೀನು ಹಿಂದೆ ಬಿದ್ದಿದೀಯ" ಅನ್ನೋ ಸಂದೇಶ ಕೊಡುತ್ತೆ. ಈ ಸ್ಪರ್ಧಾತ್ಮಕ ಜಗತ್ತಿನ ವಿಚಿತ್ರ ಇದು. ಇಂಥ ಪ್ರಪಂಚದಲ್ಲಿ ಅನವಶ್ಯಕವಾಗಿ ಕೀಳರಿಮೆ ಮೂಡಬಾರದು ಅನ್ನೋದಾದರೆ ಈ 30 ಮಾತು ನೆನಪಿಸಿಕೊಳ್ಳಿ. ಇವೆಲ್ಲ ಏನು ದೊಡ್ಡ ವೇದಾಂತ ಅಲ್ಲ, ಆದರೂ ನಿಮಗೆ ತುಂಬ ಉಪಯೋಗಕ್ಕೆ ಬರುತ್ತವೆ:

  1. ನೀವು ನಿಮ್ಮ ಕೈಯಲ್ಲಿ ಆಗೋದೆಲ್ಲ ಮಾಡ್ತಿದೀರಿ.
  2. ನಿಮ್ಮ ಕೈಯಲ್ಲಿ ಆಗೋದೆಲ್ಲ ಮಾಡ್ತಿಲ್ಲ ಅನ್ನಿಸಿದರೆ ಇನ್ನೇನ್ ಮಾಡ್ಬೋದು ಅಂತ ಯೋಚನೆ ಮಾಡಿ, ಕೆಲಸದಲ್ಲಿ ತೊಡಗಿಕೊಳ್ಳಿ.
  3. ತುಂಬಾ ಅನುಭವ ಇರೋರು ಅಥವಾ ನಿಮಗಿಂತ ತುಂಬಾ ಹಿಂದೆ ಶುರು ಮಾಡ್ಕೊಂಡೋರ್ನ ನೋಡಿ ನಾನು ಹಿಂದೆ ಇದೀನಿ ಅನ್ಕೋಬೇಡಿ. ಅವರ ಜೊತೆ ಪೈಪೋಟಿಗೆ ಇಳಿಯೋದು ಪೆದ್ದತನ.
  4. ಎಲ್ಲರಿಗೂ ಅವರದೇ ಆದ ವೇಗ ಅಂತ ಇರುತ್ತೆ.
  5. ನಿಮಗೆ ತುಂಬ ಇಷ್ಟವಿದ್ದ ಕೆಲಸ ಸಿಗದೆ ಹೋದರೆ ನೀವು ವೇಸ್ಟು ಅಂತೆನಲ್ಲ. ಜಾತಕ ಹೊಂದಲಿಲ್ಲ ಅಂತ ಅರ್ಥ!
  6. ಈಗಲೂ ನೀವು ತುಂಬಾ ಜನರಿಗಿಂತ ಮುಂದಿದೀರಿ. ನೀವು ಹಿಂದೆ ಆಗಿದ್ದ ವ್ಯಕ್ತೀನೂ ಆ ಪಟ್ಟಿಯಲ್ಲಿ ಇದಾನೆ/ಳೆ.
  7. ನಿಮಗೆ ಯಾವ ತರಹದ ಭವಿಷ್ಯ ಬೇಕಾದರೂ ರೂಪಿಸಿಕೊಳಕ್ಕೆ ಅನುಮತಿ ಇದೆ.
  8. ಜೀವನ ಅಂದ್ರೆ ಹೀಗೇ ಇರಬೇಕು ಅಂತೆನಿಲ್ಲ, ನೀವು ನಡೆಸಿದ್ದೇ ಜೀವನ.
  9. ಮೂವತ್ತನೇ ವಯಸ್ಸಿಗಿಂತ ಮುಂಚೆ ಮದುವೆ ಆಗದೆ ಹೋದರೆ ಮುಗೀತು ಕಥೆ ಅನ್ಕೋಬೇಡಿ.
  10. ಏನಾದರೂ ಆಗಿಬಿಡೋಷ್ಟು ಶ್ರಮ ಪಟ್ಟು ಕೆಲಸ ಮಾಡಿ ಉಪಯೋಗ ಇಲ್ಲ. ಅದರಿಂದ ಸಿಗೋದು ಗೆಲುವಲ್ಲ, ನಿಃಶಕ್ತಿ.
  11. ಮನಸ್ಥಿತಿ ಸರಿಯಾಗಿಲ್ಲದೆ ಇದ್ದರೆ ನಿಮಗೆ ನೀವೇ ಎಷ್ಟು ಹೇಳಿಕೊಂಡರೂ ಸ್ಫೂರ್ತಿ ಬರಲ್ಲ.
  12. ನಿಮ್ಮ ವಯಸ್ಸು ಇಪ್ಪತ್ತು-ಚಿಲ್ಲರೆ ಆದರೆ ನಿಮ್ಮ ಮುಂದೆ ಇನ್ನೂ ಇಡೀ ಜೀವನವೇ ಇದೆ, ಅದರಲ್ಲಿ ಎಂಥ ಅದ್ಭುತಗಳಾಗುತ್ತವೆ ಅಂತ ಈಗಲೇ ಹೇಳಕ್ಕಾಗಲ್ಲ.
  13. ನಿಮಗೆ ಬೇಕಾದ ಸ್ಫೂರ್ತಿ ಸಿಕ್ಕಿಲ್ಲದೆ ಇರಕ್ಕೆ ಕಾರಣ ಸರಿಯಾದ ವ್ಯಕ್ತಿ ಇನ್ನೂ‌ ಸಿಕ್ಕಿಲ್ಲದೆ ಇರೋದು ಅನ್ನಿಸುತ್ತೆ.
  14. ಯಾವಾಗಲೂ ಹೀಗೇ ತುಸುಕ್ ಅಂತ ಕೂತಿರಲ್ಲ  ನೀವು.
  15. ನಿಮ್ಮ ಭಾವನೆಗಳು ಇನ್ನಷ್ಟು ಕೆಲಸ ಮಾಡೋದಕ್ಕೆ ಪ್ರೇರಣೆ ಆಗಬೇಕು, ಕಡಿಮೆ ಕೆಲಸ ಮಾಡಕ್ಕಲ್ಲ.
  16. ಸರಿಯಾದ ಜೀವನ, ತಪ್ಪು ಜೀವನ ಅಂತ ಏನೂ ಇರಲ್ಲ.
  17. ಸಮಯ ನಿಮ್ಮ ಹತೋಟಿಗೆ ಮೀರಿದ್ದು.
  18. ಮುಂದಿನ 24 ಗಂಟೆ ಬಗ್ಗೆ ಯೋಚನೆ ಮಾಡಿ. ಅದರಲ್ಲಿ ಸಾಧಿಸಕ್ಕೆ ಆಗೋದನ್ನೆಲ್ಲ ಸಾಧಿಸಿ.
  19. ಸಾಮಾಜಿಕ ತಾಣಗಳಲ್ಲಿ ಜನ ಬರೀ ಒಳ್ಳೇ ಸುದ್ದಿಗಳು, ಒಳ್ಳೇ ಫೋಟೋಗಳ್ನೇ ಹಂಚಿಕೊಳ್ಳೋದು. ಒಳಗೆ ಏನಿರುತ್ತೋ ಯಾರಿಗ್ ಗೊತ್ತು?
  20. ಇಲ್ಲೀವರೆಗೆ ನೀವು ಏನೇನು ಸಾಧಿಸಿದ್ದೀರಿ ಅಂತ ಮೆಲಕು ಹಾಕಿ.
  21. ಸದ್ಯಕ್ಕೆ ಒಂದು ದಿನಕ್ಕಿಂತ ಹೆಚ್ಚು ಪ್ಲಾನ್ ಮಾಡಬೇಡಿ.
  22. ಇನ್ನೂ ಮಾಡಕ್ಕೆ ತುಂಬಾ ಇದೆ ಅಂತ ಯೋಚನೆ ಮಾಡ್ಕೊಂಡ್ ಕೂತ್ಕೋಬೇಡಿ. ಅದರಿಂದ ಕೆಲಸ ಬೇಗೇನು ಆಗಲ್ಲ.
  23. ಬೇಕಾದಾಗ ಸಲಹೆ, ಸಹಾಯ ಕೇಳೋದ್ರಿಂದ ನೀವು ಇನ್ನಷ್ಟು ಬುದ್ಧಿವಂತರಾಗ್ತೀರಿ, ಇನ್ನಷ್ಟು ಗಟ್ಟಿ ಆಗ್ತೀರಿ.
  24. ನಿಮಗೆ ಸಹಾಯ ಮಾಡ್ದೋರ್ನ ನೆನಪಿಸಿಕೊಳ್ಳಿ. ಆಗ ಗೊತ್ತಾಗುತ್ತೆ, ನೀವು ಒಂಟಿ ಅಲ್ಲ ಅಂತ.
  25. ಕೆಲಸ ಮುಂದಕ್ಕೆ ಹೋಗ್ತಿಲ್ಲ ಅಂದಾಗ ನಿಮ್ಮ ಪ್ರಕಾರ ಅದ್ಭುತವಾಗಿ ಕೆಲಸ ಮಾಡೋರು ಯಾರನ್ನಾದರೂ ನೆನಪಿಸಿಕೊಳ್ಳಿ. ಆಗ ಮುಂದಕ್ಕೆ ಹೋಗುತ್ತೆ.
  26. ಕಾಲೇಜ್ ಮುಗಿಸಿದ ತಕ್ಷಣ ಕೆಲಸ ಸಿಕ್ಕಿಲ್ಲದೆ ಹೋದರೆ ನೀವು ವೇಸ್ಟು ಅಂತಲ್ಲ. ನಿಮಗೆ ಸರಿ ಹೋಗೋ‌ ಕೆಲಸಗಳು ಇನ್ನೂ‌ ನಿಮ್ಮ ಕಣ್ಣಿಗೆ ಬಿದ್ದಿಲ್ಲ ಅಂತ ಅರ್ಥ.
  27. ಚೆನ್ನಾಗಿ ಜೀವನ ಮಾಡೋದು ಅಂದ್ರೆ ಯಾವುದೇ ಚಿಂತೆ ಇಲ್ಲದೆ ಜೀವನ ಮಾಡೋದು.
  28. ನಿಮ್ಮ ತಂದೆ-ತಾಯಿ ಹೇಳಿದ್ದನ್ನೇ ನೀವು ಮಾಡಬೇಕು ಅಂತಿಲ್ಲ. ನಿಮ್ಮ ದಾರಿ ನೀವು ಕಂಡ್ಕೊಳಿ.
  29. ಎಷ್ಟು ಸಲ ಬೇಕಾದರೂ, ಯಾವಾಗ ಬೇಕಾದರೂ ನಿಮ್ಮ ಮನಸ್ಸು ಬದಲಾಯಿಸಿ. ಬೇಡ ಅನ್ನೋನ್ ಯಾವನು?
  30. ಎಲ್ಲಾ ಬೇಗ್-ಬೇಗ ಮಾಡೋದೇ ಪ್ರಗತಿ ಅನ್ನೋದು ಮೂರ್ಖತನ

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: