ಲಹರಿ ಕಂಪನಿಯೋರು ಕಿರಿಕ್ ಪಾರ್ಟಿಗೆ ಮಾಡ್ತಿರೋ ಕಿರಿಕ್ಗೆ ಟ್ವಿಟರ್ ಹತ್ಕೊಂಡ್ ಉರೀತಿದೆ

ಅಂತೂ ಕನ್ನಡದ ಫಿಲಂಗಳಿಗೆ ಒಂದಲ್ಲ ಒಂದು ಕಷ್ಟ ಕೊಡ್ತಾರಪ್ಪ

ನೆನ್ನೆ ಸಕ್ಕತ್ ಕಿರೀಕ್ ಆಗಿದೆ.

ಲಹರಿ ಮ್ಯೂಸಿಕ್ನೋರು ರಕ್ಷಿತ್ ಶೆಟ್ಟಿ ತೆಗ್ದಿರೋ ಕಿರಿಕ್ ಪಾರ್ಟಿ ಫಿಲಂ ರಿಲೀಸ್ ಆಗದೆ ಇರೋಹಂಗೆ ಕೋರ್ಟಲ್ಲಿ ಒಂದು ಸ್ಟೇ ಆರ್ಡರ್ ತಂದಿದಾರೆ

"ಹೇ ಹೂ ಆರ್ ಯೂ" ಅನ್ನೋ‌ ಹಾಡು ಶಾಂತಿ ಕ್ರಾಂತಿ ಚಿತ್ರದ ಒಂದು ಹಾಡಿನ ಕಾಪಿರೈಟ್ ಉಲ್ಲಂಘಿಸ್ತಾ ಇದೆ ಅನ್ನೋದು ಅವರ ವಾದ. ಆದರೆ ಎರಡೂ ಹಾಡಿನ ಸ್ವರಗಳಿಗೆ ಹೋಲಿಕೇನೇ ಇಲ್ಲ ಅನ್ನೋದು ಸ್ಪಷ್ಟ ಅಂತ ಕಿರೀಕ್ ಪಾರ್ಟಿ ತಂಡ ಗಟ್ಟಿಯಾಗಿ ನಿಂತಿದೆ. ಪುಷ್ಕರ ಮಲ್ಲಿಕಾರ್ಜುನಯ್ಯ ಅವರು ಈ ಬಗ್ಗೆ ಒಂದು ದೊಡ್ಡ ಫೇಸ್ಬುಕ್ ಪೋಸ್ಟ್ ಬರ್ದಿದಾರೆ.

ಲಹರಿ ಮ್ಯೂಸಿಕ್ನೋರಿಗೆ ಈ ಹಾಡಿನ ಬಗ್ಗೆ ಡಿಸೆಂಬರ್ 2ನೇ ತಾರೀಕಿಂದಾನೇ ಗೊತ್ತಿತ್ತು.

ಆಗಲೇ ಅವರು ಕ್ಯಾತೆ ಎತ್ತಿ 20 ಲಕ್ಷ ರೂ ಕೊಟ್ಟುಬಿಡಿ, ಸೆಟಲ್ ಮಾಡ್ಕೊಳೋಣ ಅಂತ ಬೇರೆ ಹೇಳಿದ್ದರಂತೆ.

ಆದರೆ ಯಾವುದೇ ಕಾನೂನಿನ ಉಲ್ಲಂಘನೆ ಮಾಡಿಲ್ಲ ಅನ್ನೋ ನಿಟ್ಟಿನಲ್ಲಿ ಕಿರಿಕ್ ಪಾರ್ಟಿ ತಂಡ ಇದಕ್ಕೆ ಒಪ್ಪಿರಲಿಲ್ಲ. ಲಹರಿನೋರು ಅವತ್ತಿಂದ ಇವತ್ತಿನ ವರೆಗೆ ಸುಮ್ಮನೆ ಇದ್ದುಬಿಟ್ಟು ರಿಲೀಸ್ ಆಗೋ ಹಿಂದಿನ ದಿನ ತಮ್ಮ ಕಿರಿಕ್ ಶುರು ಮಾಡಿದಾರೆ… ನೋಟೀಸ್ ಕಳಸಿ.

ಇದೇ ತರಹ ಹಿಂದೇನೂ ರಣವಿಕ್ರಮ ಮತ್ತೆ ಮೈನಾ ಫಿಲಂಗಳು ರಿಲೀಸ್ ಆಗುವಾಗಲೂ ಈ ಲಹರಿ ಮ್ಯೂಸಿಕ್ನೋರು ಕನ್ನಡಿಗರಿಗೆ ತೊಂದರೆ ಕೊಟ್ಟಿದಾರೆ, ಇದು ಅದರದೇ ಮುಂದುವರಿಕೆ ಅನ್ನೋದು ಕಿರಿಕ್ ಪಾರ್ಟಿ ತಂಡದ ವಾದ. ಆದರೂ ಇನ್ನೇನು ಫಿಲಂ ರಿಲೀಸ್ ಆಗಬೇಕು ಅಂದಾಗ ಕೋರ್ಟು ಕಚೇರಿ ಅಂತ ಅಲೆಯಕ್ಕಾಗಲ್ಲ ಅಂತ ಪಾಪ ಕಿರಿಕ್ ಪಾರ್ಟಿ ತಂಡದೋರು ಆ ಹಾಡ್ನ ಡಿಲೀಟ್ ಮಾಡಿ ಫಿಲಂ ರಿಲೀಸ್ ಮಾಡ್ತಿದಾರೆ.

ಜನ ಲಹರಿ ಕಂಪನಿ ಮಾಲೀಕ ವೇಲೂಗೆ ಕ್ಯಾಕರಿಸಿ ಉಗೀತಿದಾರೆ. ಕನ್ನಡಿಗರು ಯಾರ ಕಡೆ ಇದಾರೆ ಅನ್ನೋದಂತೂ ಸ್ಪಷ್ಟ.

ಇಲ್ಲಿ ನೋಡಿ, ಗೊತ್ತಾಗುತ್ತೆ.

ಟ್ರೋಲ್ ಕನ್ನಡ ಅನ್ನೋ ಟ್ವಿಟರ್ ಹ್ಯಾಂಡಲ್ನೋರು ತಮ್ಮ ಭಾವನೆಗಳ್ನ ವ್ಯಕ್ತ ಪಡ್ಸಿದ್ದು ಹೀಗೆ:

ಓತ್ಲಾ ಅಂತೂ ಒಂದು ಹಾಡೇ ಬುಟ್ಬುಟ್ಟೌನೆ:

ಪ್ರವೀಣ್ ವೈದ್ಯ ಅನ್ನೋರು ಏನ್ ಹೇಳಿದಾರೆ ನೋಡಿ:

ಅರ್ಪಿತಾ ಭಟ್ ಅಂತೂ ಕಿರಿಕ್-ಗೇ ಕಿರಿಕಾ ಅಂತ ಕೇಳಿದಾರೆ:

ಒಂದ್ ತಿಂಗ್ಳಿಂದ ಏನ್ ಮಾಡ್ತಿದ್ರಿ ಅಂತ ರಾಜಶೇಖರ್ ಪಾಟೀಲ್ ಕೇಳಿದ್ದು ಹೀಗೆ:

ಬಿ. ಶ್ರೀನಿವಾಸ ಅನ್ನೋರು ಕಿರಿಕ್ ಪಾರ್ಟಿ ಫಿಲಮ್ಮಿಂದಾನೇ ಒಂದು ಸೀನ್ ತೊಗೊಂಡು ಮೆಮೆ ಮಾಡಿ ಚೆಚ್ಚಿದಾರೆ:

ಚೇತನ್ ಸೆಂಡಿಗೆಣ್ಣವರ್ ಕೂಡ ಇಷ್ಟ್ ದಿನ ಏನ್ ಮಾಡ್ತಿದ್ರಿ ಅಂತ ಕೇಳಿದಾರೆ:

@hinduwarrior15 ಅನ್ನೋರಂತೂ ರಕ್ಷಿತ್ ಶೆಟ್ಟಿ ಅಭಿಮಾನಿಗಳ ಭಾವನೆಗಳಿಗೆ ಹೀಗೆ ಕನ್ನಡಿ ಹಿಡಿದಿದಾರೆ:

 

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನಿಮ್ಮ ಲೈಕೇ ನಮಗೆ ಪ್ರೇರಣೆ. ಕಳ್ಕೊಳಕ್ಕೇನಿದೆ? ಮಾಡಿಬಿಡಿ!

2017ರಲ್ಲಿ ಒತ್ತಡ ಕಡಿಮೆ ಮಾಡ್ಕೊಂಡು ಜೀವನ ಸವೀಬೇಕು ಅಂತಿದ್ರೆ ಇಲ್ಲಿ ಸ್ವಲ್ಪ ಕೇಳಿ

ಸುಂದರ ಬದುಕು ನಿಮ್ಮದಾಗಿಸಿಕೊಳ್ಳೋ ಆಸೆ ಇದ್ರೆ

ಬೆಳಗಾದ್ರೆ ಕೆಲಸಕ್ಕೆ ಓಡೋ ಭರಾಟೆಲಿರ್ತೀವಿ, ಹೆಣ್ಣುಮಕ್ಕಳಾದ್ರೆ ಮನೆ ಕೆಲಸ ಎಲ್ಲ ಮುಗಿಸಿ ಓಡಬೇಕು, ಕೆಲಸದಲ್ಲೆನು ಒತ್ತಡಕ್ಕೆ ಕೊರತೇನ? ಇದೆಲ್ಲ ಮುಗಿದಮೇಲೆ ನನ್ನನ್ನ ಗಮನಿಸಿಕೊಳ್ತಿಲ್ಲಾ ಅನ್ನೋ ಗಂಡ/ ಹೆಂಡತಿ, ಆಡೋಕು ನನ್ನ ಜೊತೆ ಬರೋಲ್ವಾ ಅನ್ನೋ ಮಕ್ಕಳು....... ಯಾಕಪ್ಪ ಜೀವನ ಅನ್ಸುತ್ತೆ ದಿನದ ಕೊನೆಲಿ. 

ಇದೆಲ್ಲಾ ನಿಮಗೂ ಅನ್ನಿಸ್ತಿದ್ರೆ ಖಂಡಿತ ಇವೆಲ್ಲದರ ಬಗ್ಗೆ ಗಮನ ಹರಿಸೋಕು ಇದು ಸರಿಯಾದ ಸಮಯ.

1. ದಾರಿ ತಪ್ಪಿಸೋರ್ನ ದೂರ ಇಡಿ

ಕೆಲವರನ್ನ ಕಷ್ಟದಲ್ಲಿ ಭೇಟಿ ಮಾಡೋಕೆ ಪ್ಲ್ಯಾನ್ ಮಾಡಿರ್ತೀರಿ. ಆದ್ರೆ ಅವರನ್ನ ಭೇಟಿ ಮಾಡಿದ್ರೆ ಬೇಡದ ಮಾತುಗಳು, ಬೇಡದ ವಿಷಯಗಳು ನಿಮ್ಮನ್ನ ಕಾಡುತ್ತೆ ಅನ್ನಿಸಿದ್ರೆ ಅಂಥವರ ಜೊತೆ ಕಳೆಯೋ ಸಮಯಾನ ಕಡಿಮೆ ಮಾಡಿಕೊಳ್ಳಿ. ಸಾಧ್ಯ ಆದ್ರೆ ಅಂಥವರನ್ನ ಭೇಟಿ ಮಾಡದೇ ಇರೋದೆ ಒಳ್ಳೇದು.

ಅವರೇ ಕಾಫಿಗೋ ಊಟಕ್ಕೋ ಕರೆದರೆ ಹೋಗದೇ ಇರೋಕೆ ನೆಪ ಹುಡುಕಿ, ಖುಷಿ ಆಗಿರ್ತೀರಿ.

ಮೂಲ

2. ಯಾವಾಗಲೂ ಲೇಟು ಅನ್ನಿಸಿಕೋಬೇಡಿ, ನಿಮ್ಮ ದಿನಾನ ಸರಿಯಾಗಿ ಪ್ಲಾನ್ ಮಾಡಿ

ದಿನ ತಡವಾಗಿ ಹೋಗಿ ಹೋಗಿ ಒತ್ತಡ ಜಾಸ್ತಿ ಆಗ್ತಿದ್ರೆ ನಿಮ್ಮ ದಿನದ ಪ್ಲ್ಯಾನ್ ನಲ್ಲಿ ಬದಲಾವಣೆ ಮಾಡಿಕೊಳ್ಳಿ. ಗಾಡಿ ಓಡಿಸೋ ಸಮಯ, ಟ್ರಾಫಿಕ್ ಜೊತೇಲಿ ನಿಮ್ಮ ಸಣ್ಣ ಪುಟ್ಟ ಕೆಲಸಗಳಿಗೂ ಸಮಯ ಕೊಟ್ಟು ಪ್ಲ್ಯಾನ್ ಮಾಡಿ,  ಬಸ್ ಬೇಗ ಹತ್ತಿ, ಅರ್ಧ ಗಂಟೆ ಮುಂಚೆ ಮನೆಯಿಂದ ಹೊರಡಿ, ಆಗ ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳು ಆಗುತ್ವೆ.

ಮೂಲ

3. ಮಾಡಬೇಕಾದ ಕೆಲಸ ಬೆಟ್ಟದಂಗೆ ಬೆಳೀಬಾರದು… ಹಂಗೆ ನೋಡ್ಕೊಳಿ

ಬೆಳಗಾದ ತಕ್ಷಣ ನಿಮ್ಮ ಕಣ್ಮುಂದೆ ರಾಶಿ ರಾಶಿ ಕೆಲಸ ಕಂಡ್ರೆ ಯಾರಿಗೆ ತಾನೆ ಖುಷಿ ಆಗುತ್ತೆ ಹೇಳಿ!! ಆದ್ರೆ ಹಾಗಂತ ನಾವು ತಪ್ಪಿಸ್ಕೊಳ್ಳೋಹಾಗೂ ಇಲ್ಲ ಅಲ್ವ? ಆದ್ರಿಂದ ನಿಮ್ಮ ಕೆಲಸಗಳ ಎರಡು ಪಟ್ಟಿ ಮಾಡ್ಕೊಳ್ಳಿ. ಒಂದು ನಿಮಗೆ ಖುಷಿ ಕೊಡೋದು ಮತ್ತೊಂದು ನಿಮಗೆ ಇಷ್ಟ ಆಗದ್ದು. ಈಗ ಇವರಡನ್ನೊ ಸಮಾನವಾಗಿ ಮಾಡುತ್ತಾ ಹೋಗಿ.

ನಿಮಗೆ ನಿಮ್ಮ ಹೆಂಡತಿನ ಶಾಪಿಂಗ್ ಕರ್ಕೊಂಡು ಹೋಗೋದು ಇಷ್ಟ ಇಲ್ಲ ಅಂದ್ರೆ, ನಿಮಗೆ ಬೇಕಾದನ್ನು ನೀವೂ ಕೊಳ್ಳಬಹುದಾದ ಅಂಗಡಿಗೆ ಹೋಗಿ. ನಿಮಗೆ ಬೇಕಾದ್ದು ನೀವು ತಗೊಳ್ಳಿ ಅವರಿಗೆ ಬೇಕದ್ದು ಅವರು ತಗೋತಾರೆ, ಕೆಲಸ ಖುಷಿಲೇ ಮುಗೀತಲ್ವ?

ಮೂಲ

4. ನಿಮ್ಮ ಸಾಮಾನು ಚೆಲ್ಲಾಪಿಲ್ಲಿ ಆಗದೆ ಇರೋಹಂಗೆ ನೋಡ್ಕೊಳ್ಳಿ

ವಾರ ಇಡೀ ಬ್ಯುಸಿ ಆಗಿರೋ ನಿಮಗೆ ಬಳಸಿದ ವಸ್ತುಗಳನ್ನ ಅದದೇ ಜಾಗಗಳಿಗೆ ಸೇರಿಸೋದು ಕಷ್ಟ ಆಗಿ ನಾಳೆ ನಾಳೆ ಅನ್ಕೋತಾ ಒಂದು ರಾಶಿ ಆಗಿದ್ರೆ ಅದನ್ನೆಲ್ಲ ಶನಿವಾರ ಮಾಡಬೇಕನ್ನೋ ಒತ್ತಡ ಕಾಡುತ್ತಿದ್ರೆ. ಬೇಸರ ಇಲ್ಲದೆ ನಿಮಗಿಷ್ಟ ಆಗೋ ಸಂಗೀತ ಕೇಳುತ್ತ ಕೆಲಸ ಮಾಡಿ, ಜೊತೇಲಿ ಕೆಲಸ ಎಲ್ಲ ಮುಗಿದ ಮೇಲೆ ನಿಮಗಿಷ್ಟ ಆಗೋ ಜಾಗಕ್ಕೆ ಹೋಗೋ ಪ್ಲಾನ್ ಮಾಡ್ಕೊಳ್ಳಿ ಆಗ ಒತ್ತಡ ಇರಲ್ಲ.

ಮೂಲ

5. ಭಿನ್ನಾಭಿಪ್ರಾಯಗಳನ್ನ ಪಕ್ಕಕ್ಕಿಡಿ

ಎಷ್ಟೋ ಸಾರಿ ಎದುರಿಗೆ ಇರೋ ವ್ಯಕ್ತಿಗೆ ನಮ್ಮ ಮನಸ್ಸಿನಲ್ಲಿರೋ ಮಾತು ಹೇಳೋಕಾಗ್ದೆ ಒಳಗೊಳಗೇ ಗೊಣಗಾಡ್ತ ಇರ್ತೀವಿ. ಇದು ನಿಮಗೆ ಒತ್ತಡ ಹೇರುತ್ತೆ. ಇದರಿಂದ ಹೊರಬರೋಕೆ ಮಾತುಗಳನ್ನ ಆಡೋ ಅಭ್ಯಾಸ ಮಾಡಿಕೊಂಡ್ರೆ ಒಳ್ಳೇದು ಇಲ್ಲ ಅಂದ್ರೆ 10 ನಿಮಿಷಕ್ಕಿಂತ ಹೆಚ್ಚು ಯಾವುದೇ ವಿಷಯಕ್ಕೂ ತಲೆ ಕೆಡಿಸಿಕೊಳಲ್ಲ ಅಂತ ನಿರ್ಧಾರ ಮಾಡಿ. ಅಕಸ್ಮಾತ್ ನಿಮ್ಮ ಮನಸ್ಸು ನಿಮ್ಮ ಮಾತು ಕೇಳ್ತಿಲ್ಲ ಅಂದ್ರೆ ಒಂದು ಪೇಪರ್ ನಲ್ಲಿ ನಿಮಗನ್ನಿಸಿದ್ದನ್ನೆಲ್ಲ ಬರೆದು ಸುಟ್ಟು ಹಾಕಿ, ಮನಸ್ಸು ನಿರಾಳ ಅನ್ಸುತ್ತೆ.

ಮೂಲ

6. ಇಲ್ಲ/ಆಗಲ್ಲ ಅನ್ನೋದನ್ನ ಅಭ್ಯಾಸ ಮಾಡ್ಕೊಳ್ಳಿ

ಯಾರಾರು ಏನಾರು ಕೆಲಸ ಹೇಳಿದಾಗ ಮನಸ್ಸು ಆಗಲ್ಲ ಅಂತಿದ್ರು ತುಟಿ ಹೂ ಅನ್ನೋಕೆ ಬಿಡಬೇಡಿ. ನಿಮಗಿಷ್ಟ ಇಲ್ಲದ್ದನ್ನ ಕೇಳಿದ್ರೆ ಇಲ್ಲ ಅನ್ನೋ ಅಭ್ಯಾಸ ಮಾಡ್ಕೊಳ್ಳಿ ಅಥವಾ ಆ ಕೆಲಸ ಇಷ್ಟ ಪಡೋ ವ್ಯಕ್ತಿಗೆ ಅದನ್ನ ಹೇಳೋ ಅಭ್ಯಾಸ ಮಾಡ್ಕೊಳ್ಳಿ ನಿಮಗೂ ಖುಷಿ ಅವರಿಗೂ ಖುಷಿ. ಹತ್ತು ಕೆಲಸ ಒಪ್ಪಿಕೊಂಡು ಸರಿಯಾಗಿ ಮಾಡದೇ ಇರೋಕ್ಕಿಂತ ಒಂದನ್ನ ಸರಿಯಾಗಿ ಮಾಡೋದು ಒಳ್ಳೇದಲ್ವಾ?

ಮೂಲ

7. ಮನೆಯೋರ ಜೊತೆ ಹೆಂಗಿರಬೇಕು ಅಂತ ತಿಳ್ಕೊಳಿ

ಯಾವುದಾದ್ರೂ ಹಬ್ಬ ಹರಿದಿನಗಳಲ್ಲಿ ಎಲ್ಲರೂ ಒಂದು ಕಡೆ ಸೇರಿ ಮಾತಾಡೋ ಪರಿಸ್ಥಿತೀಲಿ ನಿಮಗೆ ಅಲ್ಲಿಂದ ಓಡೋಗ್ಬೇಕು ಅಂತ ಅನ್ಸಿದ್ರೆ ನಿಮಗೆ ನಿಮ್ಮ ಕುಟುಂಬದಲ್ಲೂ ಒತ್ತಡ ಇದೆ ಅಂತರ್ಥ. ನೆಂಟರ ಕೊಂಕು, ಅದಕ್ಕೆ ತಲೆ ಆಡಿಸೋ ಅಪ್ಪ - ಅಮ್ಮ ನಿಮಗೆ ಹಿಂಸೆ ಅನ್ನಿಸ್ತಿದ್ರೆ ಅವ್ರನ್ನೆಲ್ಲ ಬದಿಗಿಟ್ಟು ಯೋಚ್ನೆ ಮಾಡಿ ಅಥವಾ ಅವರು ಮಾತು ಆರಂಬಿಸೋಕೆ ಮುಂಚೆ ನೀವೇ ನಿಮಗಿಷ್ಟ ಆಗೋ ಮಾತು ಶುರು ಮಾಡಿ, ಇನ್ನು ಕಷ್ಟ ಅನ್ಸಿದ್ರೆ ಸ್ವಲ್ಪ ಸಮಯ ಮಾತ್ರ ಅವರ ಜೊತೆಲಿರಿ, ನಿಮಗೆ ಹೆಚ್ಚು ತೊಂದ್ರೆ ಕೊಡೊ ಸಂಬಂಧಗಳು ದೂರ ಇದ್ದಷ್ಟು ಒಳ್ಳೇದು.

ಮೂಲ

8. ಹಿಂದೆ ಮಾಡಿದ ಕೆಲಸ ಆಡಿದ ಮಾತು ಮರೆತುಬಿಡಿ

ಹಿಂದೆ ಯಾರ ಜೊತೆಲಾದ್ರೂ ಜಗಳ ಆಡಿದ್ರೆ ಅಥವಾ ಚಿಕ್ಕವಯಸ್ಸಿನಲ್ಲಿ ಯಾವತ್ತಾದ್ರೂ ತಪ್ಪು ಮಾಡಿದ್ರೆ ಅದನ್ನೇ ಮೆಲುಕು ಹಾಕೋದು ಬಿಡಿ, ಅದರಿಂದ ಏನೂ ಬದಲಾಗಲ್ಲ ಅನ್ನೋದು ನಿಮಗೆ ಗೊತ್ತಿದೆ ತಾನೇ. ನೆನ್ನೆ ಬಗ್ಗೆ ಯೋಚ್ನೆ ಮಾಡೋದ್ರಿಂದ ನೀವು ಅದೇ ಘಟನೆಗಳಲ್ಲಿ ಜೀವನ ಮಾಡೋದು ಹೆಚ್ಚು, ಅದು ನಿಜ ಜೀವನದ ಒತ್ತಡಕ್ಕಿಂತ ನಿಮಗೆ ಹೆಚ್ಚು ತೊಂದ್ರೆ ಕೊಡುತ್ತೆ. ಹಳೇದನ್ನ ಮರೆಯೋ ಪ್ರಯತ್ನ ಮಾಡಿ ಅಥವಾ ಬೇರೆ ವಿಷಯಗಳಲ್ಲಿ ನಿಮ್ಮನ್ನ ತೊಡಗಿಸಿಕೊಳ್ಳಿ.

ಮೂಲ

ಕೇಳಿದ್ರೇನೇ ನಿರಾಳ ಅನ್ಸುತ್ತೆ ಇನ್ನು ಮಾಡಿದ್ರೆ.... ಹಾಗಿದ್ರೆ ತಡ ಯಾಕೆ?

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: