ನಮ್ಮ ಮೈ ಬಗ್ಗೆ ನಮಗೇ ಗೊತ್ತಿಲ್ಲದಿರೋ 20 ವಿಚಿತ್ರ ಸತ್ಯಗಳು

ಆದ್ಭುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇಹದಲ್ಲೇ ಇವೆ

ನಮ್ಮ ದೇಹಕ್ಕೆ ಯಾವ್ದು ಸರಿ? ಚಳಿ ಇದ್ರೆ ಒಳ್ಳೆದಾ? ಬಿಸಿಲಾದ್ರೆ ಒಳ್ಳೆದಾ? ಯಾವ್ದು ಶೀತ ಯಾವ್ದು ಉಷ್ಣ, ಏನು ತಿಂದ್ರೆ ಒಳ್ಳೇದು ಏನು ಮಾಡಿದ್ರೆ ಒಳ್ಳೇದು... ಈ ಎಲ್ಲಾ ವಿಷಯಗಳು ನಮಗೆ ಚೆನ್ನಾಗೇ ಗೊತ್ತಿರುತ್ತೆ. ಆದರೆ ನಮ್ಮ ದೇಹದ ಬಗ್ಗೆ ತಿಳ್ಕೊಳಕ್ಕೆ ಬ್ರಹ್ಮಾಂಡದಷ್ಟಿದೆ. ಅದರಲ್ಲಿ ನೀವು ಪ್ರಾಯಶಃ ಕೇಳಿಲ್ಲದಿರೋ 20 ವಿಷಯಗಳ್ನ ಹೇಳ್ತೀವಿ ಕೇಳಿ… ಮೊದಲು ಕೇಳಿದಾಗ ನಮಗೆ ಬಹಳ ಆಶ್ಚರ್ಯ ಆಯಿತು. ನಿಮಗೂ ಆಗೋದ್ರಲ್ಲಿ ಸಂದೇಹ ಇಲ್ಲ, ಓದ್ತಾ ಹೋಗಿ…

1. ಒಬ್ಬೊಬ್ಬರ ನಾಲಿಗೆ ಇನ್ನೊಬ್ಬರ ತರಹ ಇರಲ್ಲ - ಬೆರಳಚ್ಚು ಹೇಗೋ ಹಾಗೆ

ಸೈನ್ ಹಾಕಕ್ಕೆ ಬರದೆ ಇರೋರು ಹೆಬ್ಬೆಟ್ಟು ಯಾಕೆ ಒತ್ತುತ್ತಾರೆ ಹೇಳಿ? ಯಾಕಂದ್ರೆ ಬೆರಳಚ್ಚು ಒಬ್ಬೊಬ್ಬರಿಗೂ ಬೇರ್ಬೇರೆ. ಹಾಗೇ ನಿಮ್ಮ ನಾಲಿಗೆ ಅಚ್ಚು ಕೂಡ ಬೇರೆಯೋರ ತರಹ ಇರಲ್ಲ.

ಮೂಲ

2. ಒಂದು ಕೂದಲಲ್ಲಿ ಒಂದು ಸೇಬು ನೇತು ಹಾಕಬಹುದು. ಅಷ್ಟು ಶಕ್ತಿ ಇರುತ್ತೆ ಅದಕ್ಕೆ.

3. ಭೂಮಿ ಮೇಲೆ ಎಷ್ಟು ಜನ ಇರ್ತಾರೋ ಅಷ್ಟೇ ಬ್ಯಾಕ್ಟೀರಿಯಾಗಳು ನಿಮ್ಮ ಬಾಯಲ್ಲೂ ಇರುತ್ವೆ.

ಆದ್ರೆ ಅವು ತೊಂದ್ರೆ ಮಾಡಲ್ಲ ಬಿಡಿ.

ಮೂಲ

4. ನಿಮ್ಮ ಉಗುರಲ್ಲಿ ಈ ತರಹ ಅರ್ಧಚಂದ್ರಾಕಾರ ಕಾಣಿಸ್ತಾ ಇಲ್ಲದೆ ಹೋದ್ರೆ, ಅಥವಾ ಉಗುರು ತುಂಬ ಮೃದುವಾಗಿದ್ದು ಬೇಗ ಮುರಿದು ಹೋಗ್ತಿದ್ರೆ, ನಿಮ್ಮ ಥೈರಾಯಿಡ್ ಹಾರ್ಮೋನ್ ಹೆಚ್ಚಾಗಿದೆ ಅಂತರ್ಥ.

ಮೂಲ

5. ನಿಮ್ಮ ಮೆದುಳಿಗೆ ತಲುಪೋ ವಿಚಾರಗಳು ಗಂಟೆಗೆ 400 ಕಿ.ಮಿ ವೇಗದಲ್ಲಿ ಚೆಲಿಸುತ್ತೆ.

ಮೂಲ

6. ಮನುಷ್ಯನ ರಕ್ತದಲ್ಲಿ 29 ಬಗೆ. ಅತೀ ಅಪರೂಪದ್ದು ಜಪಾನಿನ ಒಂದು ಸಣ್ಣ ಕುಟುಂಬದಲ್ಲಿ ಸಿಗುತ್ತೆ.

7. ಒಂದ್ ದಿನಕ್ಕೆ ನಮ್ಮ ರಕ್ತ ಇಡೀ ದೇಹ ಸುತ್ತು ಹಾಕಿ 19,312 ಕಿ.ಮೀ ಚಲಿಸುತ್ತೆ.

ಮೂಲ

8. ನಮ್ಮ ದೇಹದ ನರಗಳನ್ನೆಲ್ಲ ಒಟ್ತುಗೂಡಿಸಿ ನೋಡಿದ್ರೆ ಅದರ ಉದ್ದ 75 ಕಿ.ಮಿ ಆಗುತ್ತೆ.

9. ಒಂದು ದಿನಕ್ಕೆ ಸುಮಾರು 20,000 ಬಾರಿ ಉಸಿರಾಡ್ತೀವಿ.

ಮೂಲ

10. ನಮ್ಮ ಕಣ್ಣುಗಳು ಸುಮಾರು 1 ಕೋಟಿ ಬಣ್ಣಗಳನ್ನ ಗುರುತಿಸುತ್ವೆ, ಆದ್ರೆ ನಮ್ಮ ಮೆದುಳಿಗೆ ಅವನ್ನೆಲ್ಲಾ ನೆನಪಿನಲ್ಲಿಟ್ಟುಕೊಳ್ಳೋ ಶಕ್ತಿ ಇಲ್ಲ.

11. ಮನುಷ್ಯ ಬದುಕಿರೋ ವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ - ವರ್ಷಕ್ಕೆ 0.25 mm ನಷ್ಟು

ಮೂಲ

12. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ.

13. ಪ್ರತಿದಿನ ನಮ್ಮ ದೇಹ ಸುಮಾರು 1 ಕೋಟಿ ಚರ್ಮ ಕಣಗಳನ್ನ ಕಳೆದುಕೊಳ್ಳುತ್ವೆ. ಸರಿಯಾಗಿ ತೂಕ ಮಾಡಿ ನೋಡಿದ್ರೆ ವರ್ಷಕ್ಕ 2 ಕಿಲೋ ಗೊತ್ತಾ! 

14. ನಮ್ಮ ಚರ್ಮದ 1 sq.cm ವಿಸ್ತೀರ್ಣದಲ್ಲಿ ನೂರಾರು ನೋವಿನ ಕೋಶಗಳಿರುತ್ತವೆ.

15. ಹೆಣ್ಣು ಮಕ್ಕಳ ನಾಲಿಗೇಲಿ ಗಂಡು ಮಕ್ಕಳಿಗಿಂತ ಜಾಸ್ತಿ ರುಚಿಯ ಕಣಗಳು ಇರುತ್ತವೆ.

ಮೂಲ

16. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಒಟ್ಟು 35 ಟನ್ ತಿಂತಾನೆ.

17. ಒಬ್ಬ ಮನುಷ್ಯ ಕೇವಲ ಕಣ್ಣು ಮಿಟಿಕಿಸೋದ್ರಲ್ಲೇ 5 ವರ್ಷ ಕಳೀತಾನೆ.

ಮಿಟುಕಿಸ್ತಾ ಕೆಲವರು ಬೇರೆ ಕೆಲಸಾನೂ ಮಾಡ್ತಾರೆ :-)

ಮೂಲ

18. ಒಂದು ಸೆಕೆಂಡಲ್ಲಿ ನಮ್ಮ ಮೆದುಳಲ್ಲಿ 1 ಲಕ್ಷ ರಾಸಾಯನಿಕ ಕ್ರಿಯೆಗಳಾಗುತ್ವೆ.

19. ನೀವು ಶೀತ ಆದಾಗ ಸೀನ್ತೀರಲ್ಲ ಅದರ ವೇಗ ಗಂಟೆಗೆ 160 ಕಿ. ಮೀ ಇರುತ್ತೆ.

20. ನಕ್ಕಾಗ ನಿಮ್ಮ ಮುಖದ 17 ಬೇರೆ ಬೇರೆ ಮಾಂಸ ಖಂಡಗಳು ಕೆಲ್ಸ ಮಾಡುತ್ತವೆ… ಅತ್ತಾಗ 43...

ಅಂದ್ರೆ ಅಳಕ್ಕೆ ಕೆಲಸ ಜಾಸ್ತಿ ಮಾಡಬೇಕು :-)

ಮೂಲ

ಇದೇ ತರಹ ಇನ್ನೊಂದ್ 25 ಸತ್ಯಗಳ್ನ ತಿಳ್ಕೊಳೋ ಆಸೆ ಇದ್ದರೆ ಇಲ್ಲಿ ಒತ್ತಿ. ಅಂತೆಕಂತೆ ಒಂಥರಾ ಲೈಬ್ರರಿ ಇದ್ದಂಗೆ. ಓದ್ತಾ ಹೋಗಿ, ನಿಮ್ಮ ಅರಿವು ಬೆಳೀತಾನೇ ಇರುತ್ತೆ. ಮಜಾನೂ ಸಿಗುತ್ತೆ. ಸರಿ ತಾನೇ?

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನಿಮ್ಮ ಲೈಕೇ ನಮಗೆ ಪ್ರೇರಣೆ. ಕಳ್ಕೊಳಕ್ಕೇನಿದೆ? ಮಾಡಿಬಿಡಿ!

ಈ 6 ವಿಷಯ ತಿಳ್ಕೊಂಡ್ರೆ ಇನ್ಮೇಲೆ ಫೋನು, ಚಾರ್ಜರ್ ಎಲ್ಲಾ ತಗೊಳೋವಾಗ ಮೋಸ ಹೋಗಲ್ಲ

ಸ್ವಲ್ಪ ಹುಷಾರಾಗಿ ನೋಡ್ಬೇಕಷ್ಟೆ

ಹೆಸರಾಂತ ಬ್ರಾಂಡುಗಳನ್ನ ನಕಲು ಮಾಡಿ ಕಳಪೆ ಪ್ರಾಡಕ್ಟುಗಳನ್ನ ಮಾರ್ಕೆಟ್ಟಿಗೆ ಬಿಡೋದು ಮಾಮೂಲಿ. ತೆಗೊಳ್ವಾಗ ನಾವು ಹುಷಾರಾಗಿರ್ಬೇಕು. ಈ 6 ವಿಷ್ಯಗಳ್ನ ತಿಳ್ಕೊಂಡ್ರೆ, ಮೋಸ ಹೋಗೋದು ತಪ್ಪಿಸ್ಬಹುದು.

1. ಪ್ಯಾಕ್ ಮಾಡಿರೋ ರೀತಿ ಗಮನಿಸಿ- ದೊಡ್ಡ ಬ್ರಾಂಡುಗಳು ಪ್ಯಾಕೇಜಿಂಗ್ ಬಗ್ಗೆ ಕೂಡ ತುಂಬಾ ಗಮನ ಕೊಟ್ಟಿರ್ತಾರೆ

ಸಾಮಾನ್ಯವಾಗಿ ನಕಲಿ ಕಂಪೆನಿಗಳು ಪ್ಯಾಕೇಜಿಂಗ್ ಬಗ್ಗೆ ಜಾಸ್ತಿ ತಲೆ ಕೆಡಿಸ್ಕೊಳೊಲ್ಲ. ದೊಡ್ಡ ಬ್ರಾಂಡುಗಳು ಅವರ ಪ್ರಾಡಕ್ಟಿಗೆ ಯಾವ್ದೇ ಡ್ಯಾಮೇಜ್ ಆಗ್ದಿರೋ ರೀತಿ ತುಂಬ ಎಚ್ಚರಿಕೆಯಿಂದ ಪ್ಯಾಕ್ ಮಾಡಿರ್ತಾರೆ. ಫೋನಿನ ಮೂಲೆಗಳೆಲ್ಲ ಸರಿಯಾಗಿ ಹೊಂದ್ಕೊಂಡು ಕೂರೋ ರೀತಿ ಬಾಕ್ಸ್ ಡಿಸೈನ್ ಮಾಡಿರ್ತಾರೆ. ಇದನ್ನೆಲ್ಲ ಪರೀಕ್ಷೆ ಮಾಡಿ ನೋಡಿ. ಇದಲ್ಲದೆ ಬಾಕ್ಸಿನಲ್ಲಿ ಪ್ರಿಂಟ್ ಆಗಿರೋದನ್ನ ನೋಡಿ, ಫಾಂಟು ಒಂದೇ ರೀತಿ ಇರ್ಬೇಕು, ಪ್ರಿಂಟ್ ಆಗಿರೋದೆಲ್ಲ ಓದೋಕೆ ಆಗೋ ಹಾಗಿರ್ಬೇಕು.

ಮೂಲ

2. ಯೂಸರ್ ಮಾನ್ಯುವಲ್ ಇಂಗ್ಲಿಷ್ ಅಥವಾ ಭಾರತದ ಅಫಿಷಿಯಲ್ ಭಾಷೆಗಳಲ್ಲಿರ್ಬೇಕು, ನಿಮ್ಗೆ ಅರ್ಥಾನೇ ಆಗ್ದಿರೋ ಯಾವ್ದೋ ಭಾಷೆಯಲ್ಲಿರ್ಬಾರ್ದು

 ಯೂಸರ್ ಮ್ಯಾನ್ಯುವಲ್ ಯಾವುದೋ ನಿಮ್ಗೆ ಅರ್ಥ ಆಗ್ದಿರೋ ಭಾಷೆಯಲ್ಲಿದ್ರೆ ಅಥವಾ ಅದರಲ್ಲಿ ಸ್ಪೆಲ್ಲಿಂಗ್ ಮಿಸ್ಟೇಕುಗಳಿದ್ರೆ, ಅದು ಸ್ಮಗಲ್ ಆಗಿರೋ ಮಾಲು ಅಥವಾ ನಕಲಿ ಮಾಲು ಆಗಿರೋ ಸಂಭವ ಜಾಸ್ತಿ.

ಮೂಲ

3. ರಬ್ಬರ್, ಪ್ಲಾಸ್ಟಿಕ್, ಅಲ್ಯೂಮಿನಿಯಮ್ - ಯಾವ್ದೇ ಆದ್ರೂ ಒಳ್ಳೆ ಕ್ವಾಲಿಟೀದಿದ್ಯಾ ನೋಡಿ

ಎಲ್ಲೂ ಚೂಪುಚೂಪಾಗಿರೋ ಪ್ಲಾಸ್ಟಿಕ್ ಇರ್ಬಾರ್ದು. ಅದರ ಮೈ ಸಮವಾಗಿ ಇರ್ಬೇಕು, ಮೆತ್ತಗಿರ್ಬೇಕು. ಒಂದೊಂದು ಕಡೆ ಒಂದೊಂದು ರೀತಿ ಇದ್ರೆ, ನಕಲಿ ಆಗಿರೋ ಸಾಧ್ಯತೆ ಹೆಚ್ಚು. ಫೋನಿನ ಕ್ಯಾಮೆರಾ ಮತ್ತು ಫ್ಲ್ಯಾಶ್ಲೈಟಿನ ಕ್ವಾಲಿಟಿಯನ್ನೂ ನೋಡಿ. ಕೆಳಗಿನ ಚಿತ್ರದಲ್ಲಿ ಗೋಲ್ಡನ್ ಫ್ರೇಮ್ ಇರೋದು ಒರಿಜಿನಲ್, ಇನ್ನೊಂದು ನಕಲಿ. ಎರಡರಲ್ಲೂ ಕ್ಯಾಮೆರಾ ಮತ್ತು ಫ್ಲ್ಯಾಶ್ ಲೈಟ್ ಕೂರಿಸಿರೋ ರೀತಿ ನೋಡಿ. ಅಸಲಿಯಲ್ಲಿ ಸ್ಮೂತ್ ಫಿನಿಶಿಂಗ್ ಇದೆ, ನಕಲಿಯಲ್ಲಿ ಕಳಪೆ ಅಂತ ಗೊತ್ತಾಗೋ ರೀತಿ ಇದೆ.

ಮೂಲ

 

4. ಕಂಪೆನಿ ಲೋಗೋ ಗಮನಿಸಿ - ಸ್ಪೆಲ್ಲಿಂಗ್ ಮಿಸ್ಟೇಕ್ ಇದ್ಯಾ ಅಥ್ವಾ ಅವರ ಒರಿಜಿನಲ್ ಪ್ರಾಡಕ್ಟಿಗೆ ಹೋಲ್ಸಿದ್ರೆ ಏನಾದ್ರೂ ವ್ಯತ್ಯಾಸ ಇದ್ಯಾ ನೋಡಿ

ಯಾವ್ದೇ  ಕಂಪೆನಿಗೆ ಅದರ ಲೋಗೋ ಬಹಳ ಮುಖ್ಯ. ಅದರಲ್ಲಿ ಸ್ಪೆಲ್ಲಿಂಗ್ ಮಿಸ್ಟೇಕ್ ಆಗ್ಲಿ, ತಪ್ಪು ಫಾಂಟ್ ಆಗ್ಲಿ ಇರೋಕೆ ಸಾಧ್ಯಾನೇ ಇಲ್ಲ. ಅಲ್ಲದೆ ಲೋಗೋ ಅಳಿಸಿ ಹೋಗೋ ಥರ ಇರೊಲ್ಲ, ಎಷ್ಟೋ ವರ್ಷ ಉಪ್ಯೋಗ್ಸಿದ್ರೂ ಓದ್ಲಿಕ್ಕೆ ಆಗೋ ಹಾಗೆ ಇರುತ್ತೆ. ಆ ಕಂಪೆನಿಯ ವೆಬ್ಸೈಟಿನಲ್ಲಿ ಇರೋ ಪ್ರಾಡಕ್ಟುಗಳಲ್ಲಿರೋ ಲೋಗೋ ಜೊತೆ ಹೋಲಿಸಿ ನೋಡಿ. ಏನಾದ್ರೂ ವ್ಯತ್ಯಾಸ ಇದ್ರೆ ನಕಲಿ ಅನ್ನೋದ್ರಲ್ಲಿ ಸಂಶಯ ಇಲ್ಲ. ಕೆಳಗಿನ ಫೋಟೋದಲ್ಲಿರೋದು ನಕಲಿ ಪವರ್ ಬ್ಯಾಂಕು. ಅದರಲ್ಲಿರೋ ಲೋಗೋ ನಕಲಿ. ಅವರ ಅಫಿಷಿಯಲ್ ವೆಬ್ಸೈಟಿನಲ್ಲಿರೋ ಲೋಗೋ ನೋಡಿದ್ರೆ ಇದು ನಕಲಿ ಅಂತ ಗೊತ್ತಾಗುತ್ತೆ.

5. ಚಾರ್ಜರಿನ ಪ್ಲಾಸ್ಟಿಕ್ ಗಮನಿಸಿ - ಒಳ್ಳೆ ಕ್ವಾಲಿಟಿ ಇದ್ಯಾ, ಸಮವಾಗಿ ಮೆತ್ತಗಿರೋ ಪ್ಲಾಸ್ಟಿಕ್/ರಬ್ಬರ್ ಉಪ್ಯೋಗ್ಸಿದಾರಾ ನೋಡಿ

ಮೊದಲ್ನೆದಾಗಿ ಫೋನ್ ತೆಗೊಂಡಾಗ ಚಾರ್ಜರ್ ಇರ್ಲೇಬೇಕು. ಅದೇನಾದ್ರೂ ಸೆಪರೇಟ್ ಆಗಿ ತೆಗೋಬೇಕು ಅಂತ ಇದ್ರೆ ಇದು ಸ್ಮಗಲ್ ಮಾಡಿದ ಮಾಲು ಅಥ್ವಾ ನಕಲಿ ಮಾಲು ಅನ್ನೋದು ಖಂಡಿತ. ಚಾರ್ಜರ್ ಕೂಡ ಒಳ್ಳೆ ಕ್ವಾಲಿಟಿಯಲ್ಲಿರ್ಬೇಕು. ಚಾರ್ಜರಿನ ಪ್ಲಾಸ್ಟಿಕ್ಕು ಬೇರೆ ಬೇರೆ ಬಣ್ಣದಲ್ಲಿದ್ರೆ, ಎರಡು ಬಣ್ಣಗಳ ಮಧ್ಯೆ ಯಾವ್ದೇ ಗೆರೆ ಇರೊಲ್ಲ, ಅದು ಮೆತ್ತಗೆ ಇರುತ್ತೆ, ಮುಟ್ಟಿದಾಗ ಗೊತ್ತೇ ಆಗದ ಹಾಗೆ ಇರುತ್ತೆ. ಏನಾದ್ರೂ ಚೂಪಾಗಿರೋ ಗೆರೆಗಳು ಮಧ್ಯದಲ್ಲಿದ್ರೆ ನಕಲಿ ಆಗಿರೋ ಚಾನ್ಸ್ ಜಾಸ್ತಿ. ಕೆಳಗಿನ ಚಿತ್ರದಲ್ಲಿ ಎಡಗಡೆ ಇರೋದು ಅಸಲಿ, ಬಲಗಡೆಯದ್ದು ನಕಲಿ. ಎರಡರ ಫಿನಿಶಿಂಗ್ ಹೋಲಿಸಿ ನೋಡಿ.

ಮೂಲ

6. ವೈರು, ಪ್ಲಗ್ಗು ಸಾಕೆಟ್ಟಲ್ಲಿ ಸರಿಯಾಗಿ ಕೂರುತ್ತಾ, ರಬ್ಬರ್ ಒಳ್ಳೆ ಕ್ವಾಲಿಟಿ ಇದ್ಯಾ ನೋಡಿ

ವೈರು ಕೂಡ ಒಳ್ಳೆ ಕ್ವಾಲಿಟಿ ರಬ್ಬರಲ್ಲಿ ಮಾಡಿರ್ಬೇಕು. ಪ್ಲಗ್ ಮಾಡಿದಾಗ ಸ್ಮೂತ್ ಆಗಿ ಕೂರ್ಬೇಕು, ಸ್ವಲ್ಪ ಉದ್ದ ಹೆಚ್ಚಿದ್ರೆ, ಅಥ್ವಾ ಸ್ಮೂತ್ ಆಗಿ ಕೂರದಿದ್ರೆ ನಕಲಿ ಮಾಲಾಗಿರ್ಬಹುದು. ವೈರು ಫ್ಲೆಕ್ಸಿಬಲ್ ಇರ್ಬೇಕು, ಬಣ್ಣ ಸಮವಾಗಿರ್ಬೇಕು. ವೈರು, ಪ್ಲಗ್ಗುಗಳ ಮೇಲೆ ಏನಾದ್ರೂ ಸಿಂಬಲ್ಗಳಿದ್ರೆ ಅದು ಅಳಿಸಿ ಹೋಗೋ ಹಾಗಿರ್ಬಾರ್ದು. ನೋಡಿದಾಗ ಕಳಪೆ ಕ್ವಾಲಿಟಿ ಕಂಡ್ರೆ ಹುಷಾರಾಗಿ.

ಮೂಲ

ಅಫಿಷಿಯಲ್ ವೆಬ್ಸೈಟುಗಳು, ಹೆಸರುವಾಸಿ ಅಂಗಡಿಗಳಲ್ಲಿ ತೆಗೊಳ್ವಾಗ ನಕಲಿ ಆಗಿರೋ ಸಾಧ್ಯತೆ ಕಡಿಮೆ. ಬೇರೆ ಕಡೆ ತೆಗೊಳ್ವಾಗ ಹುಷಾರಾಗಿರ್ಬೇಕು. ಯಾವಾಗ್ಲೂ ನಮ್ಮ ಎಚ್ಚರಿಕೆಯಲ್ಲಿ ನಾವಿರೋದು ಒಳ್ಳೇದು. ಸರಿ ಅಲ್ವಾ?

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: