ಪ್ರಪಂಚದ ಅತೀ ಎತ್ತರದ ಈ ಸೇತುವೆ ಕಟ್ಟಿರೋದು ಹೇಗೆ ಅಂತ ಗೊತ್ತಾದ್ರೆ ಆಶ್ಚರ್ಯಪಡ್ತೀರಿ

ಇದರ ಮೇಲೆ ನಡೆಯಕ್ಕೆ ಎದೆ ಗಟ್ಟಿ ಇರ್ಬೇಕು

ನಿಮ್ಗೆ ಎತ್ತರದ ಬಗ್ಗೆ ಹೆದ್ರಿಕೆ ಇದ್ರೆ ನಾವ್ ತೋರ್ಸೋ ವಿಡೀಯೋ ನೋಡಿ ಮೈ ಜುಮ್ ಅನ್ನತ್ತೆ. ಚೈನಾದ ಜಾಂಗಜಿಯಾಜಿಯೇಲಿರೋ ಅತಿ ಎತ್ತರದ , ಅತಿ ಉದ್ದಕ್ಕಿರೋ, ಪೂರ್ತಿ ಗಾಜಿಂದಾನೇ ಮಾಡಿರೋ ಸೇತುವೇನ ನೋಡಕ್ಕೆ ಎಲ್ಲೆಲ್ಲಿಂದ ಜನ ಬರ್ತಾರೆ ಗೊತ್ತಾ? ಜಾಂಗಜಿಯಾಜಿಯೇನ ಗಾಜಿನ ಸೇತುವೆ ಚೈನಾದ ಹುನಾನ್ ಪ್ರಾಂತ್ಯದಲ್ಲಿದೆ. ಚೈನಾದಲ್ಲಿರೋ ಅದ್ಭುತಗಳ ಸಾಲಿಗೆ ಇದೂ ಕೂಡಾ ಸೇರೋ ಸಾಧ್ಯತೆ ಇದೆ. ಇದ್ರ ಬಗ್ಗೆ ಇರೋ ಕೆಲ್ವೊಂದು ವಿಚಿತ್ರ ಸಂಗತಿಗಳನ್ನ ಬಗ್ಗೆ ತಿಳ್ಕೊಳೋಣ ಬನ್ನಿ. 

ಈ ಸೇತುವೆ 1140 ಫೀಟ್ ಉದ್ದ, 984 ಫೀಟ್ ಎತ್ತರ ಇದೆ. ಹೃದಯ ವೀಕ್ ಇರೋರಿಗೆ ಇದ್ರ ಮೇಲೆ ನಡೆಯೋದು ಒಳ್ಳೇದಲ್ಲ ಅಂತಾರೆ. ಇದರಿಂದ್ಲೇ ಒಂದ್ಸಲ ಯೋಚ್ನೆ ಮಾಡಿ ಎಷ್ಟ್ ಎತ್ತರ ಇರ್ಬಹುದು ಅಂತ!
 

ಮೂಲ

ಈ ಗಾಜಿನ ಸೇತುವೆ ಎರಡು ಬೆಟ್ಟಗಳನ್ನ ಕೂಡ್ಸತ್ತೆ

ಈ ಸೇತುವೆಯ ವಿನ್ಯಾಸವನ್ನ ಮಾಡ್ದವ್ರು ಇಸ್ರೇಲಿನ ಹೈಮ್ ದೋಟಾನ್. ಇದಕ್ಕೆ ಅವ್ರು ತಗೊಂಡಿದ್ದು 138 ಯುವಾನ್. ಆಶ್ಚರ್ಯ ಹುಟ್ಟಿಸೋ ಈ ವಿನ್ಯಾಸಾನ ಎಲ್ಲ ಕಡೇನೂ ಅಳವಡ್ಸಕೊಳ್ಳೋಕೆ ತಯಾರಿ ಆಗ್ತಾ ಇದೆ.

ಆ ಬೆಟ್ಟಾನಾ ಅವತಾರ್ ಬೆಟ್ಟ ಅಂತ ಕರೀತಾರೆ. ಮೊದಲ ಸಲ ಕಣ್ಣ್ ಹಾಯಿಸ್ದಾಗ, ಮನ್ಸಲ್ಲಿ ಕಾಡೋ ಒಂದೇ ಒಂದು ಪ್ರಶ್ನೆ... ಇದು ಸೇಫಾ? ಅಂತ. ನೀವ್ ನಂಬ್ತಿರೋ ಬಿಡ್ತೀರೊ ಗೊತ್ತಿಲ್ಲ... ಆದ್ರೆ ಇದ್ನ ಕಟ್ಟೋ ಸಮಯದಲ್ಲಿ ಸೇಫ್ಟಿಗೆ ಜಾಸ್ತಿ ಒತ್ತು ಕೊಟ್ಟಿದ್ದಾರಂತೆ.

ಈ ಸೇತುವೆಗೆ ನಾಲ್ಕು ದೊಡ್ಡ ದೊಡ್ಡ ಕಂಬಗಳು ಕ್ಯಾನನ್ನ ಅಕ್ಕ ಪಕ್ಕ ಇದೆ. ಜೊತೆಗೆ 99 ಪ್ಯಾನಲ್ ಇದೆ. ಪ್ರತಿಯೊಂದು ಫಲಕ ಕೂಡಾ ಗಟ್ಟಿಯಾದ ಮೂರು ಪದರಗಳ ಲೋಹದಿಂದ ಕೂಡಿದೆ. ಇದ್ರಲ್ಲೇ ಗೊತ್ತಾಗತ್ತೆ ಯಾವ್ದೇ ಒಂದು ಪದರ ಬಿರುಕ್ ಬಿಟ್ಟು ಒಡ್ದಹೋಯ್ತು ಅಂದ್ರೆ ಇನ್ನೆರಡು ಪದರ ನಿಮ್ನ ಉಳ್ಸೋಕಿರತ್ತೆ ಅಂತ!

ಮೂಲ

ಒಂದೇ ಸಲ 800 ಜನರು ಇದ್ರ ಮೇಲೆ ಹೋಗ್ಬಹುದಂತೆ!

ಇದು ಎಷ್ಟರ ಮಟ್ಟಿಗೆ ಸೇಫಾಗಿದೆಯಂದ್ರೆ , ಒಂದು ದೊಡ್ಡ ಸ್ಲೆಜ್ ಹ್ಯಾಮರ್ನಿಂದ ಹೊಡೆದ್ರೂ ಎನು ಆಗಿಲ್ಲ! ಆದ್ರೂ ಕೂಡಾ ಜನ ಇದ್ರ ಮೇಲೆ ಒಡಾಡೋಕೆ ಹೆದ್ರತಾರೆ.

2016ರ ಆಗಸ್ಟಲ್ಲಿ ಇದ್ನ ತೆರ್ದಾಗ ದಿನನಿತ್ಯ 8000 ಜನ್ರು ಬರ್ತಾರೆ ಅನ್ನೋ ನಿರೀಕ್ಷೆಯಿತ್ತು.  ಅದ್ರೆ ದಿನನಿತ್ಯ ಬರೋಬ್ಬರಿ 80,000 ಜನರು ಇದನ್ನ ನೋಡಕ್ಕೆ ಬಂದ್ರಂತೆ!

ಮೂಲ

ಸದ್ಯಕ್ಕೆ ಈ ಸೇತುವೆ ಮೇಲೆ ನೀವು ಹೋಗಕ್ಕಾಗಲ್ಲ. ಇನ್ನೂ ಹೆಚ್ಚಿನ ರೀತೀಲಿ ಅಪ್ಡೇಟ್ ಆಗೋಕೆ ತಯಾರಿ ಮಾಡ್ತಾ ಇದ್ದಾರಂತೆ. ಮತ್ತೆ ಪುನ: ಯಾವಾಗ ತೆರೀತಾರೆ ಅನ್ನೋದು ಇನ್ನೂ ಗೊತ್ತಾಗಿಲ್ಲ. ಅದಕ್ಕ್ ಮುಂಚೆ ಇಲ್ಲೇ ಒಂದ್ಸರ್ತಿ ನೋಡಿಕೊಂಡ್ಬಿಡಿ!

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ:

ನವರಾತ್ರೀಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಹಾಕ್ಕೊಂಡ್ರೆ ಒಳ್ಳೇದು ಅಂತ ತಿಳ್ಕೊಳಿ

ಐದನೇ ದಿನ ಬಿಳಿ ಬಣ್ಣ

ದೇಶ ಪೂರ್ತಿ ನವರಾತ್ರಿ ಸಂಭ್ರಮ ಕಳೆಕಟ್ಟಿದೆ. ಕರ್ನಾಟಕದಲ್ಲಿ ದಸರ ಫೇಮಸ್ಸಾದ್ರೆ, ತಮಿಳುನಾಡಲ್ಲಿ ಗೊಲು, ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ... ಹೀಗೆ. ಈ ಹಬ್ಬದ ಸಂದರ್ಭದಲ್ಲಿ ಯಾವತ್ತು ದೇವಿಯ ಯಾವ ರೂಪದ ಪೂಜೆ ಮಾಡ್ತಾರೆ? ಯಾವ ದಿನ ಯಾವ ಬಣ್ಣದ ಬಟ್ಟೇ ಹಾಕ್ಕೊಂಡ್ರೆ ಒಳ್ಳೇದು?  ಯಾವ ಫಲಗಳಲನ್ನ ಪಡ್ಕೋಬೋದು ಅನ್ನೋ ಕಿರು ಪರಿಚಯ ಇಲ್ಲಿದೆ ನೋಡಿ.

1. ಮೊದಲ ದಿನ ಹಳದಿ ಬಣ್ಣ

ನವರಾತ್ರಿಯ ಮೊದಲನೇ ದಿನ ಶೈಲಪುತ್ರೀ ಅಂದ್ರೆ ಪರ್ವತ ರಾಜನ ಮಗಳ ಪೂಜೆ ಮಾಡ್ತಾರೆ.ಇವಳು ಬ್ರಹ್ಮ-ವಿಷ್ಣು- ಮಹೇಶ್ವರರ ಸಾಕಾರ ಅಂತ ಹೇಳ್ತಾರೆ. ತ್ರಿಶೂಲ ಹಾಗೂ ಕಮಲದ ಹೂವನ್ನ ಕೈಯಲ್ಲಿ ಹಿಡಿದಿರೋ ಈ ಮಾತೆಯ ವಾಹನ  ಗೂಳಿ. ಈ ದೇವಿಯನ್ನ ಸತಿ, ಭವಾನಿ, ಪಾರ್ವತಿ ಹಾಗೆ ಹೇಮಾವತಿ ಅನ್ನೋ ಹೆಸರಿಂದಾನೂ ಕರೀತಾರೆ.

ಮೊದಲನೇ ದಿನದ ಈ ದೇವಿ ಪೂಜೆಗೆ ಹಳದಿ ಬಣ್ಣದ ಬಟ್ಟೆ ಹಾಕ್ಕೊಂಡ್ರೆ ಒಳ್ಳೇದು ಅಂತಾರೆ.

ಮೂಲ

2. ಎರಡನೇ ದಿನ ಹಸಿರು ಬಣ್ಣ

ಕೈಯಲ್ಲಿ ಜಪಮಾಲೆ ಹಾಗೂ ಕಮಂಡಲ ಹಿಡಿದಿರೋ ದೇವಿಯ ಈ ಅವತಾರವನ್ನ ಬ್ರಹ್ಮಚಾರಿಣಿ ಅಂತ ಹೇಳ್ತಾರೆ. ಎರಡನೇ ದಿನದ ಪೂಜೆ ಬ್ರಹ್ಮಚಾರಿಣಿಗೆ ಸಲ್ಲುತ್ತೆ. ಈ ರೂಪ ಸಂತೋಷ, ಶಾಂತಿ ಹಾಗೂ ಸಮೃದ್ಧಿಯ ಸಂಕೇತ. ಬ್ರಹ್ಮಚಾರಿಣಿ ಆಶ್ರಮದಲ್ಲಿರೋ ಶ್ರದ್ದಾ ಭಕ್ತಿಯಿಂದ ಕೂಡಿರೋ ತಪಸ್ವಿನಿಯ ರೂಪ. ಹಾಗಾಗೇ ಈ ದೇವಿಯನ್ನ ಮೋಕ್ಷಕ್ಕೆ  ದಾರಿ ತೋರಿಸೋಳು ಅಂತಾನೂ ಹೇಳ್ತಾರೆ.

ಈ ರೂಪದ ದೇವಿಯನ್ನ ಪೂಜೆ ಮಾಡಕ್ಕೆ ಹಸಿರು ಬಣ್ಣದ ಬಟ್ಟೆ ಹಾಕ್ಕೊಂಡ್ರೆ ಒಳ್ಳೇದು.

ಮೂಲ

3. ಮೂರನೇ ದಿನ ಬೂದು ಬಣ್ಣ

ಚಂದ್ರಘಂಟ ಅನ್ನೋ ಹೆಸರಿಂದ ಪ್ರಸಿದ್ಧಿಯಾಗಿರೋ ಈ ದೇವಿಯ ಪೂಜೆ ಮೂರನೇ ದಿನ ಮಾಡ್ಬೇಕು. ಇವಳನ್ನ ಚಂದ್ರಿಕಾ, ರಣಚಂಡಿ ಅನ್ನೋ ಹೆಸರಿಂದಾನೂ ಕರೀತಾರೆ. ಈಕೆಯ ಹಣೆ ಮೇಲೆ ಘಂಟೆಯಾಕಾರದಲ್ಲಿ ಅರ್ಧ ಚಂದ್ರ ಇದ್ದಾನೆ. ಜೀವನದಲ್ಲಿ ಶಾಂತಿ ಹಾಗೂ ಅಭ್ಯುದಯಕ್ಕಾಗಿ ಈ ದೇವಿಯ ಪೂಜೆ ಮಾಡ್ತಾರೆ. ಪ್ರಕಾಶಮಾನವಾದ ಮೈಬಣ್ಣ ಹೊಂದಿರೋ ಈ ದೇವಿ ವಾಹನ ಸಿಂಹ. ಹತ್ತು ಕೈ, ಮೂರು ಕಣ್ಣು, ಎಲ್ಲ ಕೈಯ್ಯಲ್ಲೂ ಆಯುಧಗಳನ್ನ ಹೊಂದಿರೋ ಈ ದೇವಿ ಯುದ್ಧ ಹಾಗೂ ಶೌರ್ಯದ ಅಧಿದೇವತೆ. ರಾಕ್ಷಸರ, ಕೆಟ್ಟವರ ವಿರುದ್ಧ ಯುದ್ಧ ಮಾಡಕ್ಕೆ ಅಂತಾನೆ ಇವಳ ಮೂರನೇ ಕಣ್ಣು ಯಾವಾಗ್ಲೂ ತೆಗೆದಿರುತ್ತೆ ಅಂತಾರೆ.

ಈ ದಿನದ ಪೂಜೆ ಮಾಡಕ್ಕೆ ಬೂದುಬಣ್ಣದ ಬಟ್ಟೆ ಧರಿಸಿದ್ರೆ ಒಳ್ಳೇದು.

ಮೂಲ

4. ನಾಲ್ಕನೇ ದಿನ ಕಿತ್ತಳೆ ಬಣ್ಣ

ಕೂಷ್ಮಾಂಡಾ ದೇವಿ ತನ್ನ ನಗು ಮುಖಕ್ಕೆ ಹೆಸರುವಾಸಿ. ದೇವಿಯ ಈ ರೂಪಾನ ಪ್ರಪಂಚದ ಸೃಷ್ಟಿಕರ್ತೆ ಅಂತ ಕರೀತಾರೆ. ಈ ದೇವಿ ಆರೋಗ್ಯ, ಶಕ್ತಿ ಹಾಗೂ ಸಂಪತ್ತನ್ನು ದಯಪಾಲಿಸ್ತಾಳಂತೆ. ಈ ದೇವಿಯ ಪೂಜೆ ನಾಲ್ಕನೇ ದಿನ ನಡೆಯುತ್ತೆ. ಈ ದೇವಿಗೆ 8 -10 ಕೈ ಇದೆ. ಆಯುಧಗಳು, ಜಪಮಾಲೆ ಮುಂತಾದವನ್ನು ಕೈಯಲ್ಲಿ ಹಿಡಿದಿದ್ದಾಳೆ. ಅವಳ ಪ್ರಕಾಶವು ಎಲ್ಲ ದಿಕ್ಕುಗಳಲ್ಲೂ ಹರಡುತ್ತಂತೆ.

ಈ ದೇವಿಯ ಪೂಜೆ ಮಾಡಕ್ಕೆ ಕಿತ್ತಳೆ ಬಣ್ಣದ ಬಟ್ಟೆ ಹಾಕ್ಕೊಂಡ್ರೆ ಒಳ್ಳೇದು.

ಮೂಲ

5. ಐದನೇ ದಿನ ಬಿಳಿ ಬಣ್ಣ

ನವರಾತ್ರಿಯ ಐದನೆಯ ದಿನ ಸ್ಕಂದ ಮಾತೆ ಪೂಜೆ ಮಾಡ್ಬೇಕು. ಹೆಸರೇ ಹೇಳೋ ತರ ಈ ದೇವಿ ಯುದ್ಧಗಳ ಅಧಿಪತಿ ಸ್ಕಂದ ಅಥವಾ ಕಾರ್ತಿಕೇಯನ ತಾಯಿ. ಸಿಂಹದ ಮೇಲೆ ಕೂತಿರೋ ಈ ದೇವಿಗೆ ನಾಲ್ಕು ಕೈಗಳಿದ್ದು, ಒಂದ್ಕಡೆ ಕಮಲ, ಕಮಂಡಲ, ಮಗ ಸ್ಕಂದನ್ನ ಹಿಡಿದುಕೊಂಡು ಮತ್ತೊಂದು ಕೈಯಲ್ಲಿ ಅಭಯ ಹಸ್ತ ತೋರಿಸ್ತಾಳೆ. ಇವಳನ್ನ ಭಕ್ತಿಯಿಂದ ಪೂಜಿಸೋ ಭಕ್ತರು ಎಷ್ಟೇ ಅನಕ್ಷರಸ್ಥರಾಗಿದ್ರೂ ಜ್ಞಾನ ಸಾಗರವನ್ನೇ ನೀಡುತ್ತಾಳಂತೆ. ಅಷ್ಟೇ ಅಲ್ಲ ಈ ದೇವಿ ಮೋಕ್ಷ, ಸಂಪತ್ತು, ಸಮೃದ್ಧಿ, ಹಾಗೂ ಶಕ್ತಿ ಕೊಡ್ತಾಳೆ ಅಂತ ಹೇಳ್ತಾರೆ.

ಈ ದಿನಕ್ಕೆ ಸರಿ ಹೊಂದೋದು ಬಿಳಿ ಬಟ್ಟೆ.

ಮೂಲ

6. ಆರನೇ ದಿನ ಕೆಂಪು ಬಣ್ಣ

ಹಿಂದೆ ಕಾತ್ಯ ಅನ್ನೋ ಋಷಿ ಇದ್ದ. ಅವನಿಗೆ ದೇವೀನ ತನ್ನ ಮಗಳಾಗಿ ಪಡಿಯೋ ಆಸೆಯಾಗುತ್ತೆ. ಅದಕ್ಕಾಗಿ ಕಠಿಣ ತಪಸ್ಸು ಮಾಡಿ ದೇವಿಯ ಅನುಗ್ರಹದಿಂದ ಅವಳನ್ನೇ ತನ್ನ ಮಗಳಾಗಿ ಪಡೀತಾನೆ. ಕಾತ್ಯನ ಮಗಳಾಗಿ ಹುಟ್ಟಿದ್ರಿಂದ ದೇವಿಗೆ ಕಾತ್ಯಾಯನಿ ಅನ್ನೋ ಹೆಸರು ಬರುತ್ತೆ. ಮದುವೆ ಆಗ್ದೇ ಇರೋ ಹೆಣ್ಣು ಮಕ್ಕಳು ಈ ದೇವಿಯ ಪೂಜೆ ಮಾಡೋದ್ರಿಂದ ತಮಗೆ ಇಷ್ಟವಾಗೋ ಪುರುಷನೇ ಗಂಡನಾಗಿ ಸಿಗ್ತಾನಂತೆ.

ಈ ದಿನದ ಪೂಜೆಗೆ ಕೆಂಪು ಬಣ್ಣದ ಬಟ್ಟೆ ಹಾಕ್ಕೊಂಡ್ರೆ ಒಳ್ಳೇದಂತೆ.

ಮೂಲ

7. ಏಳನೇ ದಿನ ನೀಲಿ ಬಣ್ಣ

ನವರಾತ್ರಿಯ ಏಳನೇ ದಿನ ಕಾಳ ರಾತ್ರಿ ದೇವಿ ಪೂಜೆಗೆ ಮೀಸಲು. ಕಾಳಿ, ಭದ್ರಕಾಳಿ, ಮಹಾಕಾಳಿ, ಭೈರವಿ, ರುದ್ರಾಣಿ, ಚಂಡಿ ಅಂತಾನೂ ಈ ದೇವೀನ ಕರೀತಾರೆ. ಈ ದೇವಿಗೆ ತುಂಬಾ ಅಗಲವಾದ ಕಣ್ಣಿದೆ. ಇವಳ ಉಸಿರಲ್ಲಿ ಬೆಂಕಿ ಇದೆ. ಫಳ ಫಳ ಮಿನುಗೋ ಖಡ್ಗ ಈ ದೇವಿ ಆಯುಧ.

ನೀಲಿ ಬಣ್ಣದ ಉಡುಪು ಈ ದಿನದ ಪೂಜೆಗೆ ಒಳ್ಳೇದು

ಮೂಲ

8. ಎಂಟನೇ ದಿನ ಗುಲಾಬಿ ಬಣ್ಣ

ಎಂಟನೇ ದಿನ ಮಹಾ ಗೌರಿ ಪೂಜೆ. ಈ ದೇವಿ ಶಾಂತಿ ಹಾಗು ಬುದ್ದಿವಂತಿಕೆಗೆ ಹೆಸರುವಾಸಿ. ಈ ದೇವಿ ಹಿಮಾಲಯದ ಕಾಡಿನಲ್ಲಿ ಕಠಿಣ ತಪಸ್ಸು ಮಾಡುವಾಗ ಅವಳ ಬಿಳಿ ಬಣ್ಣ ಹೋಗಿ ಕಪ್ಪಾಯಿತಂತೆ. ಆಮೇಲೆ ಶಿವ ಗಂಗೆಯ ನೀರಿಂದ ಅವಳನ್ನ ಸ್ವಚ್ಛಗೊಳಿಸಿದಾಗ ಮತ್ತೆ ಬಿಳಿ ಬಣ್ಣ ವಾಪಸ್ ಬಂತಂತೆ.

ಮಹಾ ಗೌರಿ ಪೂಜೆಗೆ ಗುಲಾಬಿ ಬಣ್ಣದ ಬಟ್ಟೆ ಒಳ್ಳೇದಂತೆ.

ಮೂಲ

9. ಒಂಭತ್ತನೇ ದಿನ ನೇರಳೆ ಬಣ್ಣ

ಹೆಸರೇ ಹೇಳೋ ತರ ಈ ದೇವಿ ಸಿದ್ದಿ ಕೊಡೋದ್ರಿಂದ ಸಿದ್ಧಿದಾತ್ರಿ ಇವಳನ್ನ ಅಂತಾರೆ. ಈ ದೇವಿಯ ವಾಹನ ಸಿಂಹ. ನಾಲ್ಕು ಕೈಗಳಿರೋ ಈ ದೇವಿ ಕೈಯಲ್ಲಿ ಕಮಲ, ಗದೆ, ಚಕ್ರ ಹಾಗೂ ಶಂಖ ಹಿಡ್ಕೊಂಡಿದ್ದಾಳೆ.

ಈ ದಿನದ ಪೂಜೆಗೆ ನೇರಳೆ ಬಣ್ಣದ ಬಟ್ಟೆ ಒಳ್ಳೇದು ಅಂತಾರೆ.

ಮೂಲ

ನವದುರ್ಗೇರ ಬಗ್ಗೆ ಎಷ್ಟೊಂದು ವಿಷ್ಯ ಗೊತ್ತಾಯ್ತು ನೋಡಿದ್ರಾ? ದೇವೀನ ಒಳ್ಳೆ ಮನಸ್ಸಿಂದ ಪೂಜೆ ಮಾಡಿ, ಎಲ್ರೂ ಅವಳ ಕೃಪೆಗೆ ಪಾತ್ರರಾಗೋಣ!

ಹಂಚಿಕೊಳ್ಳೋದು ಒಳ್ಳೆಯದು, ಹಂಚಿಕೊಳ್ಳಿ: